Telegram Join My Telegram WhatsApp Join My WhatsApp

ಪೆಟ್ರೋಲ್ ಬೆಲೆ ಭಾರಿ ಏರಿಕೆ ಆತಂಕ: ಯುದ್ಧದ ಪರಿಣಾಮವಾಗಿ ಲೀಟರ್‌ಗೆ ₹20–22 ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಇಂದಿನ ದರ ಎಷ್ಟು?

ಅಮೆರಿಕ–ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಸಾಧ್ಯತೆ ಹೆಚ್ಚಾಗಿದೆ. ಮೊದಲ ಹಂತದಲ್ಲಿ ಲೀಟರ್‌ಗೆ ₹20–22 ಹೆಚ್ಚಳವಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ತಿಳಿದುಕೊಳ್ಳಿ

ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗುವ ಆತಂಕ ದೇಶಾದ್ಯಂತ ಶುರುವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಕಚ್ಚಾ ತೈಲ ಪೂರೈಕೆಯಲ್ಲಿ ಅಸ್ತವ್ಯಸ್ತತೆ ಉಂಟಾಗಿದ್ದು, ಇದರ ಪರಿಣಾಮ ಭಾರತದಲ್ಲೂ ಇಂಧನ ಬೆಲೆಯಲ್ಲಿ ಏರಿಕೆ ಸಾಧ್ಯತೆ ಇದೆ.

ಪ್ರಸ್ತುತ ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಸರಬರಾಜು ಕೂಡ ಕೆಲವೆಡೆ ವ್ಯತ್ಯಾಸ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕೂಡ ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

ತಜ್ಞರ ಅಂದಾಜಿನ ಪ್ರಕಾರ, ಯುದ್ಧ ಪರಿಸ್ಥಿತಿ ಮುಂದುವರಿದರೆ ಮೊದಲ ಹಂತದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ₹20 ರಿಂದ ₹22 ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ. ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಮುಂದಿನ ದಿನಗಳಲ್ಲಿ ಬೆಲೆಗಳು ಇನ್ನಷ್ಟು ಏರಬಹುದು ಎಂದು ಹೇಳಲಾಗುತ್ತಿದೆ.

ಹಾರ್ಮುಜ್ ಜಲಸಂಧಿ ಸಂಕಷ್ಟ

ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದೆ. ಇದು ಇರಾನ್ ಮತ್ತು ಓಮನ್ ನಡುವೆ ಇರುವ ಸುಮಾರು 33 ಕಿ.ಮೀ ಅಗಲದ ಸಮುದ್ರ ಮಾರ್ಗ.

ಜಾಗತಿಕ ಕಚ್ಚಾ ತೈಲ ಪೂರೈಕೆಯ ಸುಮಾರು 20–30% ಭಾಗ ಇದೇ ಮಾರ್ಗದ ಮೂಲಕ ಸಾಗುತ್ತದೆ

.ಆದರೆ ಯುದ್ಧ ಆರಂಭವಾದ ಬಳಿಕ ಈ ಪ್ರದೇಶದಲ್ಲಿ ತೈಲ ಹಡಗುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಇದರಿಂದ ಜಾಗತಿಕ ತೈಲ ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ.

ಭಾರತಕ್ಕೆ ಎದುರಾಗಿರುವ ಆತಂಕ

ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಕಂಡುಬರುತ್ತಿದೆ. ಭಾರತವು ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತಾರಾಷ್ಟ್ರೀಯ ಬೆಲೆ ಏರಿಕೆಯ ಪರಿಣಾಮ ದೇಶದ ಒಳಗಿನ ಇಂಧನ ದರಗಳ ಮೇಲೂ ಬೀಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ತಕ್ಷಣ ಬೆಲೆ ಏರಿಕೆ ಆಗುವುದಿಲ್ಲ ಎಂದು ಹೇಳಲಾಗಿದೆಯಾದರೂ, ಇದೇ ಪರಿಸ್ಥಿತಿ ಇನ್ನೂ 10–15 ದಿನ ಮುಂದುವರಿದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಈ ನಡುವೆ ಭಾರತವು ಹಾರ್ಮುಜ್ ಮಾರ್ಗದ ಹೊರತಾಗಿ ಇತರ ಪ್ರದೇಶಗಳಿಂದ ಕಚ್ಚಾ ತೈಲ ಆಮದು ಮಾಡುವ ಪ್ರಯತ್ನ ಮಾಡುತ್ತಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಇಂಧನ ದರ

ಪ್ರಸ್ತುತ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದೊಡ್ಡ ಬದಲಾವಣೆ ಆಗಿಲ್ಲ. ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿದೆ:

  • ಬೆಂಗಳೂರು: ಪೆಟ್ರೋಲ್ ₹102.92, ಡೀಸೆಲ್ ₹90.99
  • ಚೆನ್ನೈ: ಪೆಟ್ರೋಲ್ ₹101.06, ಡೀಸೆಲ್ ₹92.61
  • ಮುಂಬೈ: ಪೆಟ್ರೋಲ್ ₹103.50, ಡೀಸೆಲ್ ₹90.03
  • ಕೊಲ್ಕತ್ತಾ: ಪೆಟ್ರೋಲ್ ₹105.41, ಡೀಸೆಲ್ ₹92.02
  • ದೆಹಲಿ: ಪೆಟ್ರೋಲ್ ₹94.77, ಡೀಸೆಲ್ 87.67

Leave a Comment